ರಾಜ್ಯ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತುಗಳು ಹೆಚ್ಚಾಗಿದ್ದು, ಎಲ್ಲೆಡೆ ಇದೇ ಚರ್ಚೆಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ಶೀಘ್ರದಲ್ಲೇ ಬಗೆಹರಿಯಲಿದೆ. ಸದ್ಯಕ್ಕಂತೂ ಸಿಎಂ ಬದಲಾವಣೆ ಇಲ್ಲ. ಬದಲಾವಣೆ ಮಾಡಬೇಕು ಎಂದಾಗ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ನಾವೆಲ್ಲಾ ಸೇರಿ ಚರ್ಚೆ ಮಾಡುತ್ತೇನೆ. ಆದರೆ ಈಗ ಅಂತಹ ಯಾವುದೇ ಸಂದರ್ಭ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇದ್ದಾರೆ. ಹಾಗಾಗಿ ಈ ವಿಚಾರ ಬರುವುದಿಲ್ಲ ಎಂದು ಹೇಳಿದರು.

ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಬದಲಾವಣೆ ವಿಚಾರಕ್ಕೆ ಪೂರ್ಣ ವಿರಾಮ ಇಟ್ಟಿದ್ದು, ಡಿಕೆಶಿ ಅಭಿಮಾನಿಗಳಲ್ಲಿ ಕೊಂಚ ಬೇಸರ ತರಿಸಿದೆ.

 

 

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

17 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

18 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

18 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

18 hours ago