ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ತಂದೆಯೇ 5 ವರ್ಷ ಸಿಎಂ ಆಗಿರುತ್ತಾರೆ. ರಾಜ್ಯದಲ್ಲಿ ಬದಲಾವಣೆ ಮಾತೇ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದರು.
ಇದನ್ನು ಓದಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಇನ್ನು ಕುರ್ಚಿ ಕಿತ್ತಾಟದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದೂ ಪುತ್ರ ಯತೀಂದ್ರ ಮತ್ತೆ ಈ ವಿಚಾರವನ್ನು ಹೇಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಮೂಲಕ ಕುರ್ಚಿ ಕಿತ್ತಾಟ ಮತ್ತೆ ಮುಂದುವರಿಯುವ ಸಾಧ್ಯತೆಯಿದ್ದು, ಹೈಕಮಾಂಡ್ ಏನೆಲ್ಲಾ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.





