Mysore
27
overcast clouds

Social Media

ಮಂಗಳವಾರ, 30 ಜೂನ್ 2026
Light
Dark

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

dinesh gundurao

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದರು.

ಸದ್ಯ ಯಾವುದೇ ಬದಲಾವಣೆ ಚರ್ಚೆ ಇಲ್ಲ. ಯಾರಿಗೂ ಯಾವುದೇ ಡೆಡ್‌ಲೈನ್‌ ಕೂಡ ಕೊಟ್ಟಿಲ್ಲ. ಅಂತಿಮವಾಗಿ ಹೈಕಮಾಂಡ್‌ ಏನು ಹೇಳುತ್ತದೆ ಅದನ್ನು ಒಪ್ಪಿಕೊಳ್ಳುತ್ತೇವೆ. ಸಿಎಂ ಸೇರಿದಂತೆ ಎಲ್ಲರೂ ಹೈಕಮಾಂಡ್‌ ಆದೇಶಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದರು.

Tags:
error: Content is protected !!