Mysore
28
overcast clouds

Social Media

ಬುಧವಾರ, 05 ಆಗಸ್ಟ್ 2026
Light
Dark

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು ಸಚಿವ ವೆಂಕಟೇಶ್‌ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದು ತಪ್ಪಲ್ಲ. ಆದರೆ ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೋ ನೋಡೋಣ ಎಂದು ಹೇಳಿದರು.

ಇನ್ನು ಸಚಿವ ಸಂಪುಟ ಪುನರ್‌ ರಚನೆ ವೇಳೆ ಅರ್ಧದಷ್ಟು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ಕೆಲವರ ಅಭಿಪ್ರಾಯವಾಗಿದೆ. ನಾನು ನನ್ನ ಅಭಿಪ್ರಾಯ ತಿಳಿಸುತ್ತೇನೆ. ಆದರೆ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

 

Tags:
error: Content is protected !!