ರಾಜ್ಯ

ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ: ಸಚಿವ ಚಲುವರಾಯಸ್ವಾಮಿ

ಬಳ್ಳಾರಿ: ರಾಜ್ಯದಲ್ಲಿ ಯಾವುದೇ ನವೆಂಬರ್‌ ಕ್ರಾಂತಿ ಆಗಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ನವೆಂಬರ್‌ ಕ್ರಾಂತಿ ಬಗ್ಗೆ ಬಳ್ಳಾರಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನೋಡಿ ಈಗಾಗಲೇ ನವೆಂಬರ್ ಮುಗಿಯುತ್ತ ಬಂದಿದೆ. ಆದ್ದರಿಂದ ಯಾವ ಕ್ರಾಂತಿಯೂ ಆಗಲ್ಲ. ಸಿಎಂ ಬದಲಾವಣೆ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಏನೇ ಇದ್ದರೂ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಪಕ್ಷ ಬಿಜೆಪಿ ಪಕ್ಷದ ತರ ಅಲ್ಲ. ನಮ್ಮ ಪಾಡಿಗೆ ನಾವು ಕೆಲಸ ಮಾಡುತ್ತಾ ಇದ್ದೇವೆ. ಬಿಹಾರ ಚುನಾವಣೆಯಲ್ಲಿ ಸಿಎಂ‌ ಸಿದ್ದರಾಮಯ್ಯ ಅವರು ಮೊದಲೇ ಪ್ರಚಾರ ಮಾಡಿ ಬಂದಿದ್ದರು. ಆ ಬಳಿಕ ಡಿಸಿಎಂ ಹೋದ್ರು, ಅವರು ಪಕ್ಷದ ಅಧ್ಯಕ್ಷರು ಹೀಗಾಗಿ ಪದೇ ಪದೇ ಹೋಗುತ್ತಾರೆ ಎಂದು ಹೇಳಿದರು.

ಇನ್ನು ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ನಿನ್ನೆಯೇ ತೀರ್ಮಾನ ಆಗಿದೆ. ನಿನ್ನೆಯೇ ರೈತರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ. ಕೆಲವು ಕಡೆ ಅಷ್ಟೇ ಸ್ವಲ್ಪ ಪ್ರತಿಭಟನೆ ಇರಬಹುದು. ಸಿಎಂ ನಿನ್ನೆ ನಿರಂತರವಾಗಿ ಮಾಲೀಕರ ಹಾಗೂ ರೈತರ ಜೊತೆ ಮಾತಾಡಿದ್ದಾರೆ. 3250 ರೂ ಕಾರ್ಖಾನೆ ಕೊಡಬೇಕು, 50 ರೂಪಾಯಿ ಸರ್ಕಾರ ಕೊಡುತ್ತೆ ಎಂದು ತೀರ್ಮಾನ ಆಗಿದೆ ಎಂದು ನಿನ್ನೆಯ ಸಿಎಂ ಸಿದ್ದರಾಮಯ್ಯ ಸಭೆ ಬಗ್ಗೆ ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

4 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

4 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

4 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

5 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

5 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

5 hours ago