hc mahadevappa
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಸಚಿವ ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್ ಪದೇ ಪದೇ ಬೀದಿನಾಯಿಗಳನ್ನೆಲ್ಲಾ ಹಿಡಿದು ಒಳಗಾಗಿ ಎಂದು ಹೇಳುತ್ತಿದೆ ಎಂದಿದ್ದಾರೆ.
ನಾಯಕತ್ವ ಬದಲಾವಣೆ ಕುರಿತು ಸುದ್ದಿಗಾರರು ಪ್ರಶ್ನಿಸುತ್ತಿದ್ದಂತೆ ಸಚಿವರು ನೇರವಾಗಿ ಉತ್ತರಿಸದೇ ಬೀದಿನಾಯಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಈ ಹೇಳಿಕೆ ವಿವಾದಕ್ಕೆ ಗುರಿಯಾಗಬಹುದು ಎಂಬುದು ಅರಿವಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಮಹದೇವಪ್ಪ ಅವರು, ಬೀದಿ ನಾಯಿಗಳಿಗೆ ಹೈಕೋರ್ಟ್ ಕಡಿವಾಣ ಹಾಕಲು ಸೂಚಿಸಿದೆ. ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕಿದೆ. ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ ಎಂದು ಹೇಳಿದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…