ರಾಜ್ಯ

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಸಚಿವ ಎಚ್‌.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್‌ ಪದೇ ಪದೇ ಬೀದಿನಾಯಿಗಳನ್ನೆಲ್ಲಾ ಹಿಡಿದು ಒಳಗಾಗಿ ಎಂದು ಹೇಳುತ್ತಿದೆ ಎಂದಿದ್ದಾರೆ.

ನಾಯಕತ್ವ ಬದಲಾವಣೆ ಕುರಿತು ಸುದ್ದಿಗಾರರು ಪ್ರಶ್ನಿಸುತ್ತಿದ್ದಂತೆ ಸಚಿವರು ನೇರವಾಗಿ ಉತ್ತರಿಸದೇ ಬೀದಿನಾಯಿ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಈ ಹೇಳಿಕೆ ವಿವಾದಕ್ಕೆ ಗುರಿಯಾಗಬಹುದು ಎಂಬುದು ಅರಿವಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಮಹದೇವಪ್ಪ ಅವರು, ಬೀದಿ ನಾಯಿಗಳಿಗೆ ಹೈಕೋರ್ಟ್‌ ಕಡಿವಾಣ ಹಾಕಲು ಸೂಚಿಸಿದೆ. ಈ ಬಗ್ಗೆ ಕ್ರಮಕ್ಕೆ ಮುಂದಾಗಬೇಕಿದೆ. ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

16 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

17 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

17 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

18 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

18 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

1 day ago