ರಾಜ್ಯ

ಸರ್ಕಾರದಲ್ಲಿ ಹಣಕಾಸಿನ ಕೊರತೆಯಿಲ್ಲ, ನಾನು ಹೇಳಿದ್ದು ಬರೀ ತಮಾಷೆಯಷ್ಟೇ ಎಂದ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಯ್ಯ ಬಳಿ ದುಡ್ಡಿಲ್ಲ ಎಂದು ಹೇಳಿಕೆ ನೀಡಿದ್ದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಇಂದು ಸ್ಪಷ್ಟನೆ ನೀಡಿದ್ದು, ಸರ್ಕಾರದಲ್ಲಿ ಹಣಕಾಸಿನ ಕೊರತೆಯಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಹಣಕಾಸಿನ ತೊಂದರೆಯಿಲ್ಲ. ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಹಣ ಕೊಟ್ಟಿದ್ದಾರೆ. ಅವರು ಯಾರೋ ತಮಾಷೆಗೆ ಕೇಳಿದ್ರು ಎಂದು ನಾನು ತಮಾಷೆಯಾಗಿ ಮಾತನಾಡಿದ್ದೆ. ಆದರೆ ಅದು ಬರೀ ತಮಾಷೆಯಷ್ಟೇ. ನಮ್ಮ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ. ಆದರೆ ಬಿಡುಗಡೆ ಆಗುವಾಗ ಸ್ವಲ್ಪ ವಿಳಂಬವಾಗುತ್ತದೆ. ನನ್ನ ಹೇಳಿಕೆ ಬಗ್ಗೆ ತಪ್ಪು ಕಲ್ಪನೆ ಬೇಡ. ನಾನು ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಬಾಗಲಕೋಟೆಯಲ್ಲಿ ನಿನ್ನೆ ಮಾತನಾಡಿದ್ದ ಗೃಹ ಸಚಿವ ಪರಮೇಶ್ವರ್‌ ಅವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ಧಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ಹಣವಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದರು. ಗೃಹ ಸಚಿವ ಪರಮೇಶ್ವರ್‌ ಹೇಳಿಕೆಗೆ ವಿಪಕ್ಷ ನಾಯಕರು ಕಿಡಿಕಾರಿದ್ದು, ರಾಜ್ಯ ಸರ್ಕಾರದ ಬೊಕ್ಕಸ ಸಂಪೂರ್ಣ ಖಾಲಿಯಾಗಿದೆ. ಇದನ್ನು ಪರಮೇಶ್ವರ್‌ ಅವರೇ ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದರು.

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

6 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

6 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

7 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

7 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

7 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

9 hours ago