ರಾಜ್ಯ

ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾರ್ಚ್.‌22ರಂದು ಕನ್ನಡ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಮಾರ್ಚ್.‌22ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಮಾರ್ಚ್.‌22ರಂದು ಎಸ್‌ಎಸ್‌ ಎಲ್‌ಸಿ ಸೇರಿದಂತೆ ಅನೇಕ ಪರೀಕ್ಷೆಗಳು ನಡೆಯಲಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಮಕ್ಕಳೂ ಭಯಭೀತರಾಗಿದ್ದರು. ಆದ್ದರಿಂದ ಸರ್ಕಾರ ಕರ್ನಾಟಕ ಬಂದ್‌ಗೆ ಬೆಂಬಲ ನೀಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಮಾರ್ಚ್.‌22ರಂದು ಕರ್ನಾಟಕ ಬಂದ್‌ ಮಾಡುವ ಅವಶ್ಯಕತೆ ಇರಲಿಲ್ಲ. ಸಂಘಟನೆಗಳು ಸರ್ಕಾರದ ಜೊತೆ ಮಾತನಾಡಬೇಕಿತ್ತು. ಆದ್ದರಿಂದ ಬಂದ್‌ಗೆ ನಾವು ಬೆಂಬಲ ಕೊಡಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮತ್ತೊಮ್ಮೆ ಹೇಳಿಕೆ ನೀಡುತ್ತೇನೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

108 ವರ್ಷದ ಶಾಲೆಯ ಕುಂಟು ನಡಿಗೆ..

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…

16 mins ago

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಿಗದ ನಿರೀಕ್ಷಿತ ಸ್ಪಂದನೆ

ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ  ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…

22 mins ago

‘ಟ್ರಾನ್ಸ್ ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ಆತುರದಲ್ಲಿ ಹೇರಲಾದ ಕ್ರಮ’

ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್‌ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…

27 mins ago

ರಂಗಸಮುದ್ರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…

32 mins ago

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

36 mins ago