ಬೆಂಗಳೂರು: ಮಾರ್ಚ್.22ರಂದು ಕನ್ನಡ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಮಾರ್ಚ್.22ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಮಾರ್ಚ್.22ರಂದು ಎಸ್‌ಎಸ್ ಎಲ್‌ಸಿ ಸೇರಿದಂತೆ ಅನೇಕ ಪರೀಕ್ಷೆಗಳು ನಡೆಯಲಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಮಕ್ಕಳೂ ಭಯಭೀತರಾಗಿದ್ದರು. ಆದ್ದರಿಂದ ಸರ್ಕಾರ ಕರ್ನಾಟಕ ಬಂದ್‌ಗೆ ಬೆಂಬಲ ನೀಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಮಾರ್ಚ್.22ರಂದು ಕರ್ನಾಟಕ ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ. ಸಂಘಟನೆಗಳು ಸರ್ಕಾರದ ಜೊತೆ ಮಾತನಾಡಬೇಕಿತ್ತು. ಆದ್ದರಿಂದ ಬಂದ್‌ಗೆ ನಾವು ಬೆಂಬಲ ಕೊಡಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮತ್ತೊಮ್ಮೆ ಹೇಳಿಕೆ ನೀಡುತ್ತೇನೆ ಎಂದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…