ರಾಜ್ಯ

ಮುನಿರತ್ನ ಬಂಧನದ ಹಿಂದೆ ದ್ವೇಷಕಾರಣವಿಲ್ಲ;ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಾಡಿದ್ದುಣ್ಣೋ ಮಾರಾಯ-  ಲಕ್ಷ್ಮೀ ಹೆಬ್ಬಾಳಕರ್ ಲೇವಡಿ

ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಸಕ ಮನಿರತ್ನ ಅವರ ವಿಚಾರದಲ್ಲಿ ಯಾರು ದ್ವೇಷ ರಾಜಕಾರಣ ಮಾಡುತ್ತಾರೆ? ಅವರು ಮಾಡಿರುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರೇನು ಮುನಿರತ್ನ ಅವರಿಗೆ ಕೆಟ್ಟ ಮಾತುಗಳಿಂದ ಬೈಯಿರಿ, ಅಥವಾ ಬ್ಲಾಕ್ ಮೇಲ್ ಮಾಡಿ ಎಂದು ಹೇಳಿದ್ದಾರಾ? ಮಾಡಿದ್ದುಣ್ಣೋ ಮಾರಾಯ ಎನ್ನುವಂತಾಗಿದೆ ಅವರ ಸ್ಥಿತಿ ಎಂದು ಕಿಡಿಕಾರಿದರು.

ಮಾತಿಗೆ ಕನ್ನಡಿ ಹಿಡಿಯುವ ಅವಶ್ಯತೆ ಇಲ್ಲ
ಕೆಲ ರಾಜಕಾರಣಗಳು ಮೊದಲು ಕೆಟ್ಟದಾಗಿ ಮಾತನಾಡುತ್ತಾರೆ; ಆಮೇಲೆ ತಿರುಚಿದ್ದಾರೆ, ದ್ವೇಷದ ರಾಜಕಾರಣ ಎಂದೆಲ್ಲ ಹೇಳುತ್ತಾರೆಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕೆಲವೊಬ್ಬರು ಮಾತನಾಡುತ್ತಾರೆ ನಿಜ; ಆದರೆ, ಅದನ್ನು ಪ್ರಮಾಣಿಕರಿಸಿ ನೋಡಬೇಕು. ಆದರೆ, ಮುನಿರತ್ನ ವಿಚಾರದಲ್ಲಿ ಏನಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದಕ್ಕೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲ ಎಂದು ಸಚಿವರು ಹೇಳಿದರು.

ಮುನಿರತ್ನ ಅವರು ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ ಕೂಡ ಸಹಿಸಲು ಸಾಧ್ಯವಿಲ್ಲ. ಜಾತಿ, ಜಾತಿಗಳ ಮಧ್ಯೆ ಸಂಘರ್ಷ ತರುವಂತಹ ಮಾತುಗಳನ್ನು ಯಾರೂ ಕೂಡ ಆಡಬಾರದೆಂದು ಸಚಿವರು ಇದೇ ವೇಳೆ ಕಿವಿಮಾತು ಹೇಳಿದರು.

ಮಾನವ ಸರಪಳಿಯಲ್ಲಿ 1.50 ಲಕ್ಷ ಇಲಾಖಾ ನೌಕರರು ಭಾಗಿ
ರಾಜ್ಯ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ. ಮಾನವೀಯ ಮೌಲ್ಯಗಳ ಸಾಕಾರಗೊಳಿಸುವ ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ನೌಕರವರ್ಗ ಭಾಗವಹಿಸಿದ್ದು ಹೆಮ್ಮೆ ಎನಿಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

7 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

7 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

7 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

7 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

7 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

7 hours ago