sharan prakash
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ.
ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.
ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವು ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಹೇಳಿದರು.
ಬದಲಾದ ಜೀವನಶೈಲಿ, ಅಧಿಕ ಒತ್ತಡ, ಬೊಜ್ಜು, ಮದ್ಯಪಾನ, ಧೂಮಪಾನ, ಡ್ರಗ್ಸ್ ಸೇವನೆ, ಕುಟುಂಬದ ಹಿನ್ನಲೆ ಇತ್ಯಾದಿ ಕಾರಣಗಳಿಂದ ಹೃದಯಘಾತಗಳು ಸಂಭವಿಸಿವೆ. ಯಾವುದೋ ಒಂದು ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಜನತೆ ಆತಂಕಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದರು.
ಕೋವಿಡ್ ನಂತರ ಹೃದಯಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಗುಮಾನಿಯೂ ಇದೆ. ವಾಸ್ತವವಾಗಿ ಇದಕ್ಕೂ ಅದಕ್ಕೂ ಸಂಬಂಧವೇ ಇಲ್ಲ. ಪ್ರತಿದಿನ ವ್ಯಾಯಾಮ, ಪ್ರಾಣಯಾಮ, ಸರಿಯಾದ ಸಮಯಕ್ಕೆ ನಿದ್ದೆ, ಒತ್ತಡ ಇಲ್ಲದಿರುವುದು, ಖಿನ್ನತೆ ಒಳಗಾಗದೆ ಸಮತೋಲನ ಕಾಯ್ದುಕೊಂಡರೆ ಯಾವುದೇ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ ಎಂದು ಪಾಟೀಲ್ ಸಲಹೆ ಕೊಟ್ಟರು.
ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…
ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…
ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…