ಬೆಂಗಳೂರು: ಬಳ್ಳಾರಿಯಲ್ಲಿ ನಡೆದ ಫೈರಿಂಗ್ ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಫೈರಿಂಗ್ ಪ್ರಕರಣದ ತನಿಖೆ ನಡೆಯುತ್ತಿದೆ. ಇದನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನಮ್ಮ ಪೊಲೀಸರಿಗೆ ತನಿಖೆ ಮಾಡುವ ಸಾಮರ್ಥ್ಯವಿದೆ. ನ್ಯಾಯಾಲಯದಿಂದ ಆದೇಶ ಬಂದಾಗ ಅಥವಾ ಇನ್ಯಾವುದೋ ಸನ್ನಿವೇಶ ಬಂದಾಗ ಇಂತಹ ಪ್ರಕರಣವನ್ನು ಸಿಬಿಐಗೆ ಕೊಡುತ್ತೇವೆ ಎಂದು ಹೇಳಿದರು.
ಇನ್ನ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಘಟನೆ ಬಗ್ಗೆ ಹುಬ್ಬಳ್ಳಿ-ಧಾರವಾಡ ಕಮಿಷನರ್ ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು.




