ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ. ಅದನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆಯಲ್ಲಿ ಏನಾದರೂ ಲೋಪಗಳಾಗಿದ್ದರೆ ಆಗ ಬೇರೆ ಕ್ರಮ ತೆಗೆದುಕೊಳ್ಳುತ್ತೇವೆ. ಕಾನೂನು ಪ್ರಕಾರವೇ ತನಿಖೆ ಮಾಡುತ್ತೇವೆ ಎಂದರು.
ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮದು ಒಂದೇ ಕುಟುಂಬ. ಇದು ಕೇವಲ ಸೌಜನ್ಯ ಭೇಟಿ ಅಷ್ಟೇ. ನಾವು ರಾಜಕೀಯದ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಹೇಳಿದರು.
ಮುಂಬೈ: ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ಗಳ…
ಬೆಂಗಳೂರು: ಯಾರ ಬಳಿಯೂ ಅವರವರ ಸಮುದಾಯದ ಜನಸಂಖ್ಯೆಯ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ…
ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40 ಮರಗಳ ಕಟಾವು ಮಾಡಿರುವ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮೈಸೂರಿನ ಅರಣ್ಯಾಧಿಕಾರಿಗಳಿಂದ…
ಗುಂಡ್ಲುಪೇಟೆ: ರಾತ್ರೋರಾತ್ರಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ವಾಮಿ…
ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ…
ಕೊಳ್ಳೇಗಾಲ: ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಅಗರ ಮಾಂಬಳ್ಳಿ ಪೊಲೀಸರು ಬಂಧಿಸಿ, 1096 ಕೆ.ಜಿ ಅಕ್ಕಿಯನ್ನು ಜಪ್ತಿ…