ರಾಮನಗರ: ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು, ಯಾವ ಕ್ರಾಂತಿಯೂ ಇಲ್ಲ. ಸದ್ಯಕ್ಕೆ ಈಗ ಎಲ್ಲಾ ಶಾಂತವಾಗಿದೆ ಎಂದು ಹೇಳಿದರು.
ಇದನ್ನು ಓದಿ: ಕ್ರಾಂತಿ ಎಲ್ಲಾ ʻಮಾಧ್ಯಮ ಸೃಷ್ಟಿʼ : ಸಿ.ಎಂ ಸಿಡಿಮಿಡಿ
ಇನ್ನು ಕೆಲ ಸಚಿವರು, ಶಾಸಕರು ದೆಹಲಿ ಯಾತ್ರೆ ಕೈಗೊಂಡಿರುವ ಬಗ್ಗೆ ಮಾತನಾಡಿದ ಅವರು, ಯಾರು ದೆಹಲಿಗೆ ಹೋಗಿದ್ದಾರೆ? ಯಾಕೆ ಹೋಗಿದ್ದಾರೆ ನನಗೆ ಗೊತ್ತಿಲ್ಲ. ದೆಹಲಿಯಲ್ಲಿ ಏನು ಚರ್ಚೆಯಾಗಿದೆ ಎಂದೂ ಕೂಡ ಗೊತ್ತಿಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಡಿಸಿಎಂ ಡಿಕೆಶಿ, ಡಿ.ಕೆ.ಸುರೇಶ್ ಅವರನ್ನು ಕೇಳಿ ಎಂದು ಹೇಳಿದರು.
ಇನ್ನು ಸರ್ಕಾರದಲ್ಲಿ ಯಾರೂ ಕೂಡ ಅನಗತ್ಯ ಗೊಂದಲ ಮಾಡಿಕೊಳ್ಳಬಾರದು. ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.



