ಬೆಂಗಳೂರು: ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ದಿ ವಿಚಾರಗಳನ್ನು ಚರ್ಚಿಸುವ ಉದ್ದೇಶದಿಂದ ಕೇಂದ್ರ ಸಚಿವರನ್ನು ಭೇಟಿ ಮಾಡಿದೆ. ಆದರೆ, ಮಾಜಿ ಪ್ರಧಾನಿ ದೇವೇಗೌಡ ಅವರ ಭೇಟಿ ಆಕಸ್ಮಿಕ. ಸಂಸತ್‌ಗೆ ತೆರಳುವ ಮಾರ್ಗದಲ್ಲಿ ಅವರ ಕಚೇರಿ ಇದ್ದ ಕಾರಣ ಅವರನ್ನು ಭೇಟಿಯಾಗಿದ್ದೇನೆ ಅಷ್ಟೆ. ಯಾವುದೇ ರಾಜಕೀಯ ವಿಚಾರ ಚರ್ಚಿಸಿಲ್ಲ ಎಂದರು.
ಕುಮಾರಸ್ವಾಮಿ, ಸೋಮಣ್ಣ ಅವರಂತೆ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ್ದೇನೆ. ಬೆಳಗಾವಿ ವಿಮಾನ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿದೆ. ಅವುಗಳನ್ನು ಚುರುಕುಗೊಳಿಸುವ ಸಲುವಾಗಿ ಚರ್ಚೆ ಮಾಡಲಾಗಿದೆ ಎಂದರು.





