Mysore
20
overcast clouds
Light
Dark

ನೀತಿಯೇ ಇಲ್ಲ, ನೀತಿ ಆಯೋಗದ ಸಭೆಗೆ ಹೋಗಬೇಕೆ: ಡಿ.ಕೆ ಶಿವಕುಮಾರ್‌ ಪ್ರಶ್ನೆ

ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರದ ನೀತಿ ಆಯೋಗದ ಸಭೆಯನ್ನ ಬಹಿಷ್ಕರಿಸಲು ನಿರ್ಧರಿಸಿರುವ ಕುರಿತು ಬುಧವಾರ ವಿಧನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ಬಜೆಟ್‌ ನಲ್ಲಿ ರಾಜ್ಯಕ್ಕೆ ಸರಿಯಾದ ಪ್ರಾತಿನಿದ್ಯ ಸಿಕ್ಕಲ್ಲದ ಕಾರಣ, ನಮ್ಮ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.