Dharmasthala dead bodies burried case
ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಹಾಗೂ ಅಸಹಜ ಸಾವಿನ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ದಳದ ಸದಸ್ಯರಲ್ಲಿ ಯಾರಾದರೂ ಹಿಂದೆ ಸರಿಯಲು ಬಯಸಿದರೆ ರಾಜ್ಯ ಸರ್ಕಾರ ಬೇರೆಯವರನ್ನು ನೇಮಿಸಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ. ಅದರ ಮುಖ್ಯಸ್ಥರಾದ ಡಿಜಿಪಿ ಪ್ರಣವ್ ಮೊಹಂತಿ ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಲಭ್ಯ ಇರುವ ದಾಖಲಾತಿಗಳನ್ನು ಆಧರಿಸಿ ತನಿಖೆಯನ್ನು ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಈಗಾಗಲೇ ಎಸ್‍ಐಟಿ ಸಮಿತಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೂ ಸೂಚನೆ ನೀಡಿದ್ದಾರೆ ಎಂದರು.
ಸದ್ಯಕ್ಕೆ ಎಸ್‍ಐಟಿಯಲ್ಲಿ ಆದೇಶದಲ್ಲಿ ಉಲ್ಲೇಖಿಸಿರುವಂತೆ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳು ಇರುತ್ತಾರೆ. ಒಂದು ವೇಳೆ ಯಾರಾದರೂ ಹಿಂದೆ ಸರಿಯಲು ಬಯಸಿದರೆ ಅವರನ್ನು ಪೊಲೀಸ್ ಮಹಾ ನಿರ್ದೇಶಕರು ಬದಲಾಯಿಸುತ್ತಾರೆ. ನಿನ್ನೆ ತಮಗೆ ಯಾರೋ ಮಾಹಿತಿ ನೀಡಿ ಕೆಲ ಅಧಿಕಾರಿಗಳು ಹಿಂದೆ ಸರಿಯುವ ಸಾಧ್ಯತೆಯಿದೆ ಎಂದಿದ್ದರು. ಮಾಧ್ಯಮದಲ್ಲೂ ಇದು ವರದಿಯಾಗಿತ್ತು. ಯಾವುದೇ ಕಾರಣಕ್ಕಾದರೂ ಹಿಂದೆ ಸರಿಯಲು ಮುಂದೆ ಬಂದರೆ ಆ ಸ್ಥಾನಕ್ಕೆ ಬೇರೆಯವರನ್ನು ನೇಮಿಸಲು ಎಲ್ಲಾ ಅವಕಾಶಗಳಿವೆ. ಅದೇನು ದೊಡ್ಡ ಸಮಸ್ಯೆಯಲ್ಲ ಎಂದು ಹೇಳಿದರು.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…