ರಾಜ್ಯ

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌.ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇರಾನ್‌ ಮತ್ತು ಇಸ್ರೇಲ್‌ ದೇಶಗಳ ಮಧ್ಯೆ ಯುದ್ದ ನಡೆಯುತ್ತಿದ್ದು, ಅರಬ್‌ ರಾಷ್ಟ್ರಗಳಾದ ಯುಎಸ್‌‍ಎ, ಗಲ್ಫ್, ರಷ್ಯಾದ ದೇಶಗಳಿಂದ ನಮ ದೇಶಕ್ಕೆ ಅನಿಲ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಕಾರಣದಿಂದ ಅನಿಲದ ವೆಸೆಲ್‌ (ಶಿಪ್‌ಗಳಿಗೆ) ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದರು.‌

ಸಾಮಾನ್ಯವಾಗಿ ಜನರು ಉಪಯೋಗಿಸುವ ಡೊಮೆಸ್ಟಿಕ್‌ ಗ್ಯಾಸ್‌‍ ಮತ್ತು ಕಮರ್ಷಿಯಲ್‌ ಗ್ಯಾಸ್‌‍ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಸುಮಾರು 1000 ಮೆಟ್ರಿಕ್‌ ಟನ್‌ ಅಂದರೆ ಒಂದು ದಿನಕ್ಕೆ ಸುಮಾರು 50,000 ಕಮರ್ಷಿಯಲ್‌ ಸಿಲಿಂಡರ್ಸ್‌ (19 ಕೆಜಿ) ಬೇಕಾಗುತ್ತದೆ. ಡೊಮೆಸ್ಟಿಕ್‌ ಬಳಕೆಗೆ ಸುಮಾರು 5,000 ಮೆಟ್ರಿಕ್‌ ಟನ್‌ ಅಂದ್ರೆ ದಿನಕ್ಕೆ ಸುಮಾರು 3,50,000 ಸಿಲಿಂಡರ್ಸ್‌ (14.2 ಕೆಜಿ) ಬೇಕಾಗುತ್ತದೆ. ಇದು ಕರ್ನಾಟಕ ರಾಜ್ಯದ ಪ್ರತಿ ದಿನದ ಅವಶ್ಯಕತೆಯಾಗಿದೆ.

ಭಾರತದಲ್ಲಿ ಸುಮಾರು ಶೇ.30ರಷ್ಟು ಮಾತ್ರ ಉತ್ಪಾದನೆ ಇದೆ. ಉಳಿದ ಶೇ. 60 ರಿಂದ 70ರಷ್ಟು ಆಮದು ಮಾಡಿಕೊಳ್ತಾ ಇದ್ದೇವೆ. ಅಮೇರಿಕಾ, ಗಲ್ಫ್ ಅರೇಬಿಯನ್‌ ಮತ್ತು ರಷ್ಯಾ ದೇಶಗಳಿಂದ ಆಮದು ಬರುತ್ತದೆ. ‌  ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ 25 ದಿನಕ್ಕೆ ಒಂದು ಸಿಲಿಂಡರ್‌ ನೀಡಲಾಗುತ್ತದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

5 mins ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

51 mins ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

1 hour ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

1 hour ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

2 hours ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

2 hours ago