ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಂದಾಯಿತ ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಮಾಡಲಾಗುತ್ತಿದೆ. ಪ್ರತಿದಿನ 3 ಸಾವಿರ ಸಿಲಿಂಡರ್ ಬಳಕೆ ಮಾಡಲಾಗುತ್ತಿದೆ. ಅಷ್ಟೂ ಸಿಲಿಂಡರ್‌ಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಆಟೋ ರಿಕ್ಷಾದವರು ವಿನಾಕಾರಣ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದರು.
ಎಚ್‌ಪಿಸಿಎಲ್, ಬಿಪಿಸಿಎಲ್, ಐಪಿಸಿಎಲ್ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಆದರೆ ಖಾಸಗಿ ಅನಿಲ ಪೂರೈಕೆ ಏಜೆನ್ಸಿಗಳು ದರವನ್ನು ಹೆಚ್ಚಿಸಿರುವುದರಿಂದ ಗೊಂದಲ ಉಂಟಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಖಾಸಗಿ ಏಜೆನ್ಸಿಗಳು ದರ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ ಎಂದರು.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರದಲ್ಲೆ ಅನಿಲ ಹಾಗೂ ತೈಲವನ್ನು ನೀಡಬೇಕು ಎಂದ ಅವರು, ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆಲವೊಂದು ವ್ಯತ್ಯಯಗಳಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೋರಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…