Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶವೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ನಾಯಕರು ತಮ್ಮ ತಮ್ಮ ಬಣಗಳನ್ನು ಕಟ್ಟಿಕೊಂಡು ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. ಬಣ ರಾಜಕೀಯ ಮಾಡುವುದರಿಂದ ಪಕ್ಷದಲ್ಲಿ ಒಡಕು ಜಾಸ್ತಿಯಾಗುತ್ತದೆ. ಇದನ್ನು ಒಪ್ಪಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮನವಿ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶವೇ ಇಲ್ಲ. ಬಣದ ಹೆಸರಿನಲ್ಲಿ ರಾಜಕೀಯ ಮಾಡುವುದು, ಸಭೆ, ಸಮಾರಂಭಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ನಿಲ್ಲಿಸಬೇಕು ಎಂದು ವಿನಂತಿಸುವೆ. ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ. ಅದನ್ನು ಒಡೆಯಲು ಪ್ರಯತ್ನಿಸಬೇಡಿ ಎಂದು ವಿನಂತಿಸಿದ್ದಾರೆ.

ಯಾವುದೇ ಸಭೆ, ಕಾರ್ಯಕ್ರಮಗಳು ಪಕ್ಷದ ಚೌಕಟ್ಟಿನಲ್ಲಿ ನಡೆಯಬೇಕೇ ವಿನಃ ಪಕ್ಷದ ಧ್ಯೇಯಗಳನ್ನು ವಿರೋಧಿಸಿ ನಡೆಯಬಾರದು. ಇದು ಪಕ್ಷದ ಆಶಯಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ.

ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲವರ್ಧನೆಗೆ ಹಿರಿಯರು, ಸಚಿವರು, ಶಾಸಕರು, ಸೇರಿದಂತೆ ಎಲ್ಲರ ಸಮ್ಮುಖದಲ್ಲಿ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆಂದು ತಿಳಿಸಿದ್ದಾರೆ.

ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಿರ್ಧಾರಕ್ಕೆ ಕೈಹಾಕಿದ್ದು, ಪಕ್ಷದ ಬಲವರ್ಧನೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Tags: