ರಾಜ್ಯ

ಕಾಂಗ್ರೆಸ್‌ ಸರ್ಕಾರದಿಂದ ಹೆಣ್ಣುಮಕ್ಕಳಿಗೆ ಭದ್ರತೆಯ ಗ್ಯಾರಂಟಿ ಇಲ್ಲ: ಆರ್‌. ಅಶೋಕ್‌

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯುತ್ತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ. ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ ಎಂದು ಟೀಕಿಸಿದರು.

ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್‌ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ ಎಂದು ದೂರಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ. ಈ ಸರ್ಕಾರ ಶಿಕ್ಷಣ ಇಲಾಖೆಗೆ ಅನುದಾನ ಕಡಿಮೆ ಮಾಡಿ ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಮಣಿವಣ್ಣನ್‌ ಎಂಬ ಅಧಿಕಾರಿ ಕುವೆಂಪು ವಾಣಿಯನ್ನು ತಿದ್ದುವಂತಹ ಸ್ಥಿತಿ ಇದೆ ಎಂದರು.

ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

10 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

11 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

11 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

12 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

12 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

16 hours ago