ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ.
ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ.
ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ.
ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ.
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…