ರಾಜ್ಯ

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರಲ್ಲಿ ಆತಂಕ ಅನಗತ್ಯ : ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಕಾಸ ಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಸುದ್ಧಿಗಾರರಿಗೆ ಈ ವಿಷಯ ಸ್ಪಷ್ಟಪಡಿಸಿದ ಸಚಿವರು, ರೈತರಿಗೆ ಯಾವುದೇ ರೀತಿ ತೊಂದರೆಗಳಾಗದಂತೆ ನಿಗಾ ವಹಿಸಲು ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ ಹಾಗೂ ಸುಮಾರು 2 ಲಕ್ಷ ಹೆಕ್ಟೇರ್ ಮುಸಿಕನ ಜೋಳ ಪ್ರದೇಶ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಕೆಲವು ರೈತರು ಆತಂಕದಿಂದ ಆಗಸ್ಟ್ – ಸೆಪ್ಟೆಂಬರ್ ಗೆ ಬೇಕಾದ ಗೊಬ್ಬರವನ್ನ ಈಗಲೇ ಖರೀದಿಸಲು ಮುಂದಾಗಿದ್ದು ಸಹ ತಕ್ಷಣ ಬೇಡಿಕೆ ಹೆಚ್ಚಲು ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ನಮ್ಮ ಗುರಿಗಿಂತ ಹೆಚ್ಚಿನ ದಾಸ್ತಾನು ಲಭ್ಯವಿದೆ, ಜುಲೈ ಮಾಹೆಯ ಬೇಡಿಕೆಯಂತೆ ಆಧಾರದಲ್ಲಿನ ವಿತರಣೆಯ ನಂತರವೂ ದಾಸ್ತಾನು ಉಳಿಕೆ ಇದೆ ಒಂದು ವೇಳೆ ಕೆಲವು ನಿರ್ಧಿಷ್ಟ ಪ್ರದೇಶಗಳಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಹೆಚ್ಚುವರಿಯಾಗಿ ಉಳಿಕೆಯಾಗಿರುವ ಜಿಲ್ಲೆಗಳಿಂದ ಮರುವಿಂಗಡಣೆ ಮಾಡಿ, ಸರಬರಾಜು ಮಾಡಲಾಗುವುದು, ಕೃಷಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಮನವಿ ಮಾಡಿದರು.

ಜುಲೈ ಮಾಹೆಯ ವರೆಗೆ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 5,34,009 ಮೆ.ಟನ್. ರಸಗೊಬ್ಬರ (ಎಲ್ಲಾ ವಿಧದ ರಸಗೊಬ್ಬರ ಸೇರಿ) ಹಂಚಿಕೆಯಾಗಿದೆ. ಇದರಲ್ಲಿ ಈವರೆಗೆ 4,30,633 ಮೆ.ಟನ್. ಸರಬರಾಜಾಗಿದೆ.

ಏಪ್ರಿಲ್ ನಿಂದ ಜುಲೈವರೆಗೆ ರಾಜ್ಯದಲ್ಲಿ 6,80,655 ಮೆಟ್ರಿಕ್ ಟನ್ ಯೂರಿಯಾ ಬೇಡಿಕೆ ಇದ್ದು, ಕೇಂದ್ರ ಸರ್ಕಾರದಿಂದ 6,82,500 ಮೆ. ಟನ್ ಹಂಚಿಕೆಯಾಗಿದೆ. ಇದರಲ್ಲಿ 5,26,817 ಮೆಟ್ರಿಕ್ ಟನ್ ಸರಬರಾಜಾಗಿದೆ.

ರಾಜ್ಯದಲ್ಲಿ 3,46,499 ಹಳೆ ಯೂರಿಯಾ ದಾಸ್ತಾನು ಉಳಿಕೆ ಇದ್ದು, ಕೇಂದ್ರದಿಂದ ಸರಬರಾಜಾದ ಯೂರಿಯಾ ಸೇರಿದಂತೆ 8,73,315 ಮೆಟ್ರಿಕ್ ಟನ್ ಒಟ್ಟು ಲಭ್ಯತೆ ಇತ್ತು, ಇದರಲ್ಲಿ 7,08,859 ಮೆಟ್ರಿಕ್ ಟನ್ ಯೂರಿಯಾವನ್ನು ವಿವಿಧ ಜಿಲ್ಲೆಗಳಿಗೆ ವಿತರಿಸಿದ್ದು, ರೈತರಿಗೂ ಮಾರಾಟ ಮಾಡಲಾಗಿದೆ. ಇನ್ನು 1,64,56 ಮೆಟ್ರಕ್ ಟನ್ ಯೂರಿಯ ದಾಸ್ತಾನು ಉಳಿಕೆಯಿದೆ. ಅಲ್ಲದೆ ಕೇಂದ್ರದಿಂದ ಹಂತ ಹಂತವಾಗಿ ಪೂರೈಕೆಯಾಗುವ ರಸಗೊಬ್ಬರವನ್ನು ಆಗಿಂದಾಗಲೇ ಹಂಚಿಕೆ ಮಾಡಿ ವರ್ಗಾವಣೆ ಮಾಡಲಾಗುವುದು.

ರಾಜ್ಯ ಸರ್ಕಾರ ನಿರಂತರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಸಹ ಯೂರಿಯ ಶೀಘ್ರ ಪೂರೈಕೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಯಾವುದೇ ಸಮಸ್ಯೆಗಳಿಲ್ಲದಂತೆ ರಸಗೊಬ್ಬರ ಪೂರೈಕೆ ನಿವಾರಿಸಲು ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ ಎಂದು ಎನ್. ಚಲುವರಾಯಸ್ವಾಮಿ ರವರು ತಿಳಿಸಿದ್ದಾರೆ.

ನ್ಯಾನೋ ಯೂರಿಯಾ ಕೂಡ ಪರಿಣಾಮಕಾರಿ: ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ನ್ಯಾನೋ ಯೂರಿಯಾ ಕೂಡ ಲಭ್ಯವಿದ್ದು ಇದು ಸಹ ಹೆಚ್ಚು ಪರಿಣಾಮಕಾರಿ ಮತ್ತು ಲಾಭದಾಯಕ ಎಂಬುದು ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯಗಳು, ರೈತರು ನಡೆಸಿದ ಪ್ರಯೋಗಗಳ ಸಾಭೀತಾಗಿದ್ದು. ಉಳಿತಾಯ ಕೂಡ ಆಗಲಿದೆ. ಆದ್ದರಿಂದ ಕೃಷಿಕರು ಈ ಬಗ್ಗೆಯೂ ಗಮನಹರಿಸಬೇಕೆಂದು ಸಚಿವರು ಹೇಳಿದರು.

ಅತಿಯಾದ ರಸಗಬ್ಬರ ಬಳಕೆ ಭೂಮಿಯ ಫಲವತ್ತತೆ ಹಾಗೂ ಮಾನವನ ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದ್ದು, ಮುಂದಿನ ಭವಿಷ್ಯದ ದೃಷ್ಟಿಯಿಂದ ರಸಗೊಬ್ಬರಗಳ ಬಳಕೆ ಹಸಿರು ಗೊಬ್ಬರ, ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸುವುದು ಅಗತ್ಯವಿದೆ. ಈ ಬಗ್ಗೆಯೂ ರೈತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಎನ್. ಚಲುವರಾಯಸ್ವಾಮಿ ಮಾಹಿತಿ ನೀಡಿದರು.

ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು ಶೇಕಡ 75ರಷ್ಟು ಬಿತ್ತನೆಯಾಗಿದೆ. ಶೇಕಡ 100ರಷ್ಟು ಗುರಿಸಾಧನೆ ನಿರೀಕ್ಷೆ ಹೊಂದಲಾಗಿದೆ ಎಂದು ಅವರು ವಿವರಿಸಿದರು.

ಆಂದೋಲನ ಡೆಸ್ಕ್

Recent Posts

ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ: ಆರ್.‌ಅಶೋಕ್‌

ಬೆಂಗಳೂರು: ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನದ ವೇಳೆ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ…

13 mins ago

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

1 hour ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

2 hours ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

2 hours ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

2 hours ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

3 hours ago