Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ : ಎನ್ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಈ ಬಗ್ಗೆ ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ‌ ಹಾಗೂ ಮಾರ್ಗದರ್ಶನ ನೀಡಿ ರೈತರಿಗೆ ಅಗತ್ಯದ ವೇಳೆಯಲ್ಲಿ ರಸಗೊಬ್ಬರ ಪೂರೈಸಬೇಕು  ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಸೂಚಿಸಿದರು.

ಇಂದು(ಜೂ.13) ವಿಧಾನಸೌಧದಲ್ಲಿ ಕೃಷಿ ಅಧಿಕಾರಿಗಳ ಸಭೆ ನಡೆಸಿ,  ಬಿತ್ತನೆ ಬೀಜ, ರಸಗೊಬ್ಬರಗಳ ಬಗ್ಗೆ ಅಧಿಕಾರಿಗಳು ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗು ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಅವರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಸಂಬಂಧ  ಹಲವು ಸಲಹೆಗಳನ್ನು ನೀಡಿದರು.

ಸಭೆಯಲ್ಲಿ  ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಆಹಾರ ಸಂಸ್ಕರಣೆ ಹಾಗೂ ಕಟಾವು ತಂತ್ರಜ್ಞಾನ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಜಲಾನಯನ ಅಭಿವೃದ್ಧಿ ಆಯುಕ್ತ ಡಾ. ಗಿರೀಶ್, ಕೃಷಿ ಇಲಾಖೆ ನಿರ್ದೇಶಕ ಡಾ. ಜಿ.ಟಿ.ಪುತ್ರ, ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು..

Tags: