Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಜ್ಯದಲ್ಲಿ ಡೆಂಗ್ಯೂ ಮೆಡಿಕಲ್‌ ಎಮರ್ಜೆನ್ಸಿ ಘೋಷಣೆ ಬಗ್ಗೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್‌ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಬೆಡ್‌ ಅಥವಾ ಔಷಧಿಯ ಕೊರತೆಯಿಲ್ಲ. ಡೆಂಗ್ಯೂ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್‌ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿಯವರು ತಿಳಿಸಿದ್ದಾರೆ ಎಂದರು.

ಇನ್ನೂ ಎರಡು ತಿಂಗಳು ಡೆಂಗ್ಯೂ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರತೀ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್‌ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫಿವರ್‌ ಕ್ಲಿನಿಕ್‌ ತೆರೆದು, ಟೆಸ್ಟಿಂಗ್‌ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಓಗಳಿಗೆ ಸೂಚಿಸಲಾಗಿದೆ.

ಔಷಧಿಗಳ ಲಭ್ಯತೆಯಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದರೆ ಜನರು ಹೆಚ್ಚು ಹೆಚ್ಚು ಜಾಗೃತರಾಗಿ ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸುವುದೇ ಮುಖ್ಯ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯ ಪಟ್ಟರು.

 

Tags: