ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ. ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಬೆಡ್ ಅಥವಾ ಔಷಧಿಯ ಕೊರತೆಯಿಲ್ಲ. ಡೆಂಗ್ಯೂ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿಯವರು ತಿಳಿಸಿದ್ದಾರೆ ಎಂದರು.
ಇನ್ನೂ ಎರಡು ತಿಂಗಳು ಡೆಂಗ್ಯೂ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಪ್ರತೀ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫಿವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಓಗಳಿಗೆ ಸೂಚಿಸಲಾಗಿದೆ.
ಔಷಧಿಗಳ ಲಭ್ಯತೆಯಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದರೆ ಜನರು ಹೆಚ್ಚು ಹೆಚ್ಚು ಜಾಗೃತರಾಗಿ ಡೆಂಗ್ಯೂ ಹರಡದಂತೆ ಎಚ್ಚರಿಕೆ ವಹಿಸುವುದೇ ಮುಖ್ಯ ಎಂದು ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟರು.
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…