ರಾಜ್ಯ

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ತುಮಕೂರು: ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ತುಮಕೂರಿನ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ಹೆಚ್ಚಳವಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಹಿಂದುಳಿದ ವರ್ಗಗಳ ನಾಯಕರಾದ ಸಿದ್ದರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಚೇರ್ ಖಾಲಿ ಇಲ್ಲ ಎಂದರು.

ಇನ್ನು ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ. ಯಾರು ಜಿ‌ಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ, ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ ಬಳಿಕ ನಾವು ಡಿಲೀಟ್ ಮಾಡಿಲ್ಲ ಎಂದರು‌.

ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ಶೀಘ್ರವೇ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರ

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ. ಕೇಂದ್ರದಿಂದ ಹಣ ಇನ್ನೂ ಬಂದಿಲ್ಲ. ಈಗಾಗಲೇ ನಾವು ಮೂರು ನಾಲ್ಕು ಬಾರಿ ಪತ್ರ ಬರೆದಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಮ್ಮ ಇಲಾಖೆ ನಿರ್ದೇಶಕರು ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದಾರೆ. ಆದಷ್ಟು ಬೇಗ ನೀಡಲಾಗುವುದು. ಗಣಪತಿ ಹಬ್ಬದ ಒಳಗೆ ಸಂಬಳ ನೀಡುವ ಪ್ರಯತ್ನಿಸಲಾಗುವುದು ಎಂದರು.

ನಮ್ಮ ಇಲಾಖೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಎರಡೂ ಸರ್ಕಾರದ ಅನುದಾನ ಬಳಕೆ ಆಗುತ್ತದೆ. ವಿಳಂಬ ಮೊದಲಿನಿಂದಲೂ ಆಗಿದೆ, ಇನ್ಮುಂದೆ ಈ ರೀತಿ ಆಗದ ಹಾಗೆ ನೋಡಿಕೊಳ್ಳಲಾಗುವುದು ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

4 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

4 hours ago