ಬೆಂಗಳೂರು: ಡಿಸಿಎಂ ಡಿ.ಕೆ. ಸಾಹೇಬ್ರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಎಲ್ಲರೂ ಬರಲಿ ಅನ್ನೋದಷ್ಟೇ ಅವರ ಉದ್ದೇಶವಾಗಿದೆ ಎಂದು ಹಾಸ್ಯನಟ ಸಾಧು ಕೋಕಿಲ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ.
ಡಿಕೆಶಿ ನಟ್ಟು, ಬೋಲ್ಟು ಟೈಟ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರು ಹೇಳಿರುವುದರಲ್ಲಿ ತಪ್ಪೇನಿಲ್ಲ. ಸಿಎಂ ಹಾಗೂ ಡಿಸಿಎಂ ಸಿನಿಮಾದವರನ್ನು ತಮ್ಮ ಮನೆಯವರು ಅಂದುಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ದೂರದವರಲ್ಲ. ಅವರು ಹೇಳಿರುವುದು ದೊಡ್ಡ ವಿಷಯ ಅಲ್ಲ. ಅದನ್ನು ದೊಡ್ಡ ವಿಷಯ ಮಾಡುತ್ತಿದ್ದಾರೆ ಅಷ್ಟೇ. ನೀರಿನ ವಿಚಾರದಲ್ಲಿ ಎಲ್ಲರೂ ಬರಬೇಕಿತ್ತು ಅನ್ನೋದು ಅವರ ಉದ್ದೇಶ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪರ ಬ್ಯಾಟ್ ಬೀಸಿದರು.