Mysore
18
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಹನಿಟ್ರ್ಯಾಪ್‌ ಬಗ್ಗೆ ಸಿಬಿಐ ತನಿಖೆ ಆಗಬೇಕು: ಬಿ.ವೈ.ವಿಜಯೇಂದ್ರ ಆಗ್ರಹ

ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್‌ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್‌ ಬಗ್ಗೆ ನ್ಯಾಯಾಧೀಶರು ಹಾಗೂ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ನಡೆಸಲು ಸಾಧ್ಯವಿಲ್ಲ. ಎಸ್‌ಐಟಿಯಿಂದ ಇದು ಖಂಡಿತಾ ಅಸಾಧ್ಯ. ಆದ್ದತಿಂದ ಹನಿಟ್ರ್ಯಾಪ್‌ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಆಡಳಿತ ಪಕ್ಷದ ಸದಸ್ಯರು ಹಾಗೂ ಸಹಕಾರಿ ಸಚಿವರಾದ ರಾಜಣ್ಣ ಅವರು ಬಹಳ ಗಂಭೀರವಾದ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಸಚಿವರ ಮೇಲೆ ಹನಿಟ್ರ್ಯಾಪ್‌ ಆಗಿದೆ. ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಗೃಹ ಸಚಿವರು ಇದರ ಬಗ್ಗೆ ಮಾತನಾಡಿದ್ದಾರೆ. ಪಕ್ಷಾತೀತವಾಗಿ ಇದರ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ. 48-49 ಜನರ ಮೇಲೆ ಹನಿಟ್ರ್ಯಾಪ್‌ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು.

 

 

Tags:
error: Content is protected !!