ಬೆಂಗಳೂರು: ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಬಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಬಗ್ಗೆ ನ್ಯಾಯಾಧೀಶರು ಹಾಗೂ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ನಡೆಸಲು ಸಾಧ್ಯವಿಲ್ಲ. ಎಸ್‌ಐಟಿಯಿಂದ ಇದು ಖಂಡಿತಾ ಅಸಾಧ್ಯ. ಆದ್ದತಿಂದ ಹನಿಟ್ರ್ಯಾಪ್ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಆಡಳಿತ ಪಕ್ಷದ ಸದಸ್ಯರು ಹಾಗೂ ಸಹಕಾರಿ ಸಚಿವರಾದ ರಾಜಣ್ಣ ಅವರು ಬಹಳ ಗಂಭೀರವಾದ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಸಚಿವರ ಮೇಲೆ ಹನಿಟ್ರ್ಯಾಪ್ ಆಗಿದೆ. ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಗೃಹ ಸಚಿವರು ಇದರ ಬಗ್ಗೆ ಮಾತನಾಡಿದ್ದಾರೆ. ಪಕ್ಷಾತೀತವಾಗಿ ಇದರ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ. 48-49 ಜನರ ಮೇಲೆ ಹನಿಟ್ರ್ಯಾಪ್ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು.
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…