Mysore
16
clear sky

Social Media

ಶುಕ್ರವಾರ, 30 ಜನವರಿ 2026
Light
Dark

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಲಿಲ್ಲ ಎಂದರು.

ಇದನ್ನು ಓದಿ: ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಇನ್ನು ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿದ್ದ ಎಸ್‌ಐಟಿ ದೋಷಾರೋಪ ಪಟ್ಟಿಯಲ್ಲಿ ಷಡ್ಯಂತರವಾಗಿದೆ ಎಂದು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದ ಅವರು, ಚಾರ್ಜ್‌ಶೀಟನ್ನು ಇನ್ನೂ ನೋಡಿಲ್ಲ ಎಂದು ಹೇಳಿದರು.

ಇನ್ನು ಪ್ರಧಾನಿ ಮೋದಿ ಅವರಿಗೆ ತೊಗರಿ ಬೇಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪತ್ರ ಬರೆದಿದ್ದೇನೆ ಎಂದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದರು.

Tags:
error: Content is protected !!