Mysore
28
broken clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

ರಾಜಣ್ಣ ಮನೆಯಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಪ್ಟನೆ

caste census g parameshwara

ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಾಂಸಹಾರ ಮಾಡಲಾಗಿತ್ತು. ನಾವೆಲ್ಲಾ ಊಟ ಮಾಡಿದೆವು. ಆ ವೇಳೆ ರಾಜಕೀಯವಾಗಿ ಏನು ಚರ್ಚೆ ಆಗಿಲ್ಲ. ಕೇವಲ ಊಟದ್ದೇ ಚರ್ಚೆ ಆಗಿದೆ ಎಂದು ಹೇಳಿದರು.

ಇನ್ನು ಮತ್ತೆ ಸಂಪುಟಕ್ಕೆ ಕೆ.ಎನ್.ರಾಜಣ್ಣ ಸೇರ್ಪಡೆಯಾಗಲಿದ್ದಾರ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವತ್ತೂ ರಾಜಣ್ಣಗೆ ಸಿಹಿನೇ ಕೋಡೋದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಆಯ್ತಲ್ಲ ಎಂದು ಹೇಳಿದರು.

ಇನ್ನು ಡಿಸಿಎಂ ಡಿಕೆಶಿ ಹೈಕಮಾಂಡ್‌ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಖರ್ಗೆ ಆದೇಶದ ಮೇರೆಗೆ ದೆಹಲಿಗೆ ಹೋಗಿದ್ದಾರೆ. ಡಿ.ಕೆ.ಶಿವಕುಮಾರ್‌ಗೆ ಅಸ್ಸಾಂ ಚುನಾವಣೆ ಉಸ್ತುವಾರಿ ನೀಡಿದ್ದಾರೆ. ಈ ಕುರಿತು ಚರ್ಚೆ ಮಾಡೋಕೆ ಹೋಗಿದ್ದಾರೆ. ಅದು ಬಿಟ್ಟು ಬೇರೆ ವಿಷಯ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

 

Tags:
error: Content is protected !!