caste census g parameshwara
ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನೆಯಲ್ಲಿ ಮಾಂಸಹಾರ ಮಾಡಲಾಗಿತ್ತು. ನಾವೆಲ್ಲಾ ಊಟ ಮಾಡಿದೆವು. ಆ ವೇಳೆ ರಾಜಕೀಯವಾಗಿ ಏನು ಚರ್ಚೆ ಆಗಿಲ್ಲ. ಕೇವಲ ಊಟದ್ದೇ ಚರ್ಚೆ ಆಗಿದೆ ಎಂದು ಹೇಳಿದರು.
ಇನ್ನು ಮತ್ತೆ ಸಂಪುಟಕ್ಕೆ ಕೆ.ಎನ್.ರಾಜಣ್ಣ ಸೇರ್ಪಡೆಯಾಗಲಿದ್ದಾರ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಯಾವತ್ತೂ ರಾಜಣ್ಣಗೆ ಸಿಹಿನೇ ಕೋಡೋದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹೇಳಿದ ಮೇಲೆ ಆಯ್ತಲ್ಲ ಎಂದು ಹೇಳಿದರು.
ಇನ್ನು ಡಿಸಿಎಂ ಡಿಕೆಶಿ ಹೈಕಮಾಂಡ್ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಖರ್ಗೆ ಆದೇಶದ ಮೇರೆಗೆ ದೆಹಲಿಗೆ ಹೋಗಿದ್ದಾರೆ. ಡಿ.ಕೆ.ಶಿವಕುಮಾರ್‌ಗೆ ಅಸ್ಸಾಂ ಚುನಾವಣೆ ಉಸ್ತುವಾರಿ ನೀಡಿದ್ದಾರೆ. ಈ ಕುರಿತು ಚರ್ಚೆ ಮಾಡೋಕೆ ಹೋಗಿದ್ದಾರೆ. ಅದು ಬಿಟ್ಟು ಬೇರೆ ವಿಷಯ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರನೇ ದಿನವಾದ…
ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ…
ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್…
ಬೆಂಗಳೂರು: ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರನ್ನು…
ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು…
ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು…