ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ ವರ್ಷ ಸಿಎಂ ಆಗಿರುತ್ತಾರೆ. ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಏನೂ ಹೇಳಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಪುಣರು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.





