Mysore
14
broken clouds

Social Media

ಗುರುವಾರ, 22 ಜನವರಿ 2026
Light
Dark

ನಾಳೆಯಿಂದ ಯಾವುದೇ ಗೊಂದಲ ಇರಲ್ಲ: ಒಗ್ಗಟ್ಟಿನ ಸಂದೇಶ ಸಾರಿದ ಸಿದ್ದು ಹಾಗೂ ಡಿಕೆಶಿ

ಬೆಂಗಳೂರು: ನಾಳೆಯಿಂದ ಯಾವ ಗೊಂದಲವೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿದರು.

ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬೆಳಗಿನ ಉಪಹಾರ ಸೇವಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಇದನ್ನು ಓದಿ: ಒಗ್ಗಟ್ಟಿನ ಸಂದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌

ಈ ವೇಳೆ ಇಬ್ಬರು ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೊದಲಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಿಂದೆಯೂ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇಲ್ಲ. ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿದೆ. 2028ರ ವಿಧಾನಸಭಾ ಚುನಾವಣೆ ನಮಗೆ ಬಹಳ ಮುಖ್ಯ. ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.

ಮುಂದಿನ ಚುನಾವಣೆಗೂ ನಾನು ಹಾಗೂ ಡಿಕೆಶಿ ಒಟ್ಟಿಗೆ ಹೋಗುತ್ತೇವೆ. ಸುಳ್ಳು ಅಪವಾದ ಆರೋಪ ಬಿಜೆಪಿ-ಜೆಡಿಎಸ್‌ನವರ ಚಾಳಿ. ಹೈಕಮಾಂಡ್‌ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ. ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಹೇಳಿದರು.

ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಹೈಕಮಾಂಡ್‌ ತೀರ್ಮಾನದಂತೆ ನಾವು ಕೆಲಸ ಮಾಡುತ್ತೇವೆ. ಗುಂಪುಗಾರಿಕೆ ಮಾಡುವ ಅವಶ್ಯಕತೆ ನನಗೆ ಇಲ್ಲ. ಯಾವ ಗುಂಪಿಗೂ ನಾನು ಅವಕಾಶ ಕೊಡಲ್ಲ. ನಾಳೆಯಿಂದ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.

 

 

Tags:
error: Content is protected !!