ಬೆಂಗಳೂರು: ನಾಳೆಯಿಂದ ಯಾವ ಗೊಂದಲವೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಬೆನ್ನಲ್ಲೇ ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದರು.
ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬೆಳಗಿನ ಉಪಹಾರ ಸೇವಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿದರು.
ಇದನ್ನು ಓದಿ: ಒಗ್ಗಟ್ಟಿನ ಸಂದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್
ಈ ವೇಳೆ ಇಬ್ಬರು ನಾಯಕರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮೊದಲಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಿಂದೆಯೂ ಭಿನ್ನಾಭಿಪ್ರಾಯ ಇಲ್ಲ, ಮುಂದೆಯೂ ಇಲ್ಲ. ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿದೆ. 2028ರ ವಿಧಾನಸಭಾ ಚುನಾವಣೆ ನಮಗೆ ಬಹಳ ಮುಖ್ಯ. ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.
ಮುಂದಿನ ಚುನಾವಣೆಗೂ ನಾನು ಹಾಗೂ ಡಿಕೆಶಿ ಒಟ್ಟಿಗೆ ಹೋಗುತ್ತೇವೆ. ಸುಳ್ಳು ಅಪವಾದ ಆರೋಪ ಬಿಜೆಪಿ-ಜೆಡಿಎಸ್‌ನವರ ಚಾಳಿ. ಹೈಕಮಾಂಡ್ ಹೇಳಿದಂತೆ ನಾವಿಬ್ಬರೂ ಕೇಳುತ್ತೇವೆ. ನಾಳೆಯಿಂದ ಯಾವುದೇ ಗೊಂದಲ ಇರಲ್ಲ ಎಂದು ಹೇಳಿದರು.
ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಹೈಕಮಾಂಡ್ ತೀರ್ಮಾನದಂತೆ ನಾವು ಕೆಲಸ ಮಾಡುತ್ತೇವೆ. ಗುಂಪುಗಾರಿಕೆ ಮಾಡುವ ಅವಶ್ಯಕತೆ ನನಗೆ ಇಲ್ಲ. ಯಾವ ಗುಂಪಿಗೂ ನಾನು ಅವಕಾಶ ಕೊಡಲ್ಲ. ನಾಳೆಯಿಂದ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…