ರಾಜ್ಯ

ರಾಜೀನಾಮೆ ಕೊಟ್ಟು ತನಿಖೆ ಎದುರಿಸಿದರೆ ಗೌರವ ಇರುತ್ತದೆ: ಸುರೇಶ್‌ ಬಾಬು

ಬೆಂಗಳೂರು: ಮುಡಾ ಹಗರಣ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ್ದಾಗಿದೆ. ರಾಮಕೃಷ್ಣ ಹೆಗಡೆ ತರ ಸಿದ್ದರಾಮಯ್ಯ ಕೂಡಾ ರಾಜೀನಾಮೆ ಕೊಟ್ಟು ತನಿಖ ಎದುರಿಸಿ, ನಿರ್ದೋಷಿಯಾಗಿ ಬಂದು ಮತ್ತೆ ಸಿಎಂ ಗಾದಿಗೆ ಏರಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ಆಗ್ರಹಿಸಿದ್ದಾರೆ.

ಈ ಕುರಿತು ಜೆಪಿ ಭವನದಲ್ಲಿ ಮಾತನಾಡಿರುವ ಅವರು, ತನಿಖೆ ಪೂರ್ಣವಾಗುವ ವರೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲೇಬೇಕು. ಕಾಂಗ್ರೆಸ್‌ ಕಾಲಾವಧಿಯ ಹಗರಣಗಳ ವಿರುದ್ಧ ನಾವು ಹೋರಾಟ, ಪಾದಯಾತ್ರೆ ಮಾಡಿದ್ದೇವೆ. ಯಾವಾಗ ಸಿಎಂ ಅವರು ಸದನದಲ್ಲಿ ಮುಡಾ ಬಗ್ಗೆ ಸ್ಪಷ್ಟನೆ ನೀಡದೇ ಹೊರಟು ಹೋದರೋ ಆಗ ಅನುಮಾನಗಳು ಸೃಷ್ಠಿಯಾದವು. ಈಗ ರಾಜ್ಯಪಾಲರು ಪ್ರಾಷಿಕ್ಯೂಷನ್‌ ಹೊರಡಿಸಿದ್ದಾರೆ ಎಂದರು.

ಮುಡಾ ಹಗರಣದಲ್ಲಿ ನೀವು ತಪ್ಪು ಮಾಡಿಲ್ಲ ಎಂದಾದರೇ ಇರುವ ವಿಷಯಗಳನ್ನು ಜನರ ಮುಂದಿಡಿ, ಮುಡಾದಲ್ಲಿ ಸಾಕಷ್ಟು ಅನುಮಾನಗಳಿದ್ದು, ಹಲವು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಈ ಕಾರಣಕ್ಕಾಗಿಯೇ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿಸಿದ್ದಾರೆ.

ಸಿಎಂ ಅವರಿಗೆ ಪ್ರಾಷಿಕ್ಯೂಷನ್‌ ನೀಡಿರುವ ಸಂಬಂಧ ಕಾಂಗ್ರೆಸ್‌ ಸೋಮವಾರ ಪ್ರತಿಭಟನೆ ನಡೆಸುತ್ತಿರುವ ಸಂಬಂಧ ಮಾತನಾಡಿ, ಕಾಂಗ್ರೆಸ್‌ ಸಮರ್ಥನೆ ಮಾಡಿಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ. ಸಿಎಂ ಪಾರದರ್ಶಕವಾಗಿದ್ದಾರೆ. ಕಾನೂನು ಹೋರಾಟ ಮಾಡಿ ಅದರಲ್ಲಿ ಯಶಸ್ವಿಯಾಗಿ ಬಂದು ಮತ್ತೆ ಸಿಎಂ ಆಗಿ ಮುಂದುವರೆಯಲಿ ಎಂದು ಸುರೇಶ್‌ ಬಾಬು ಒತ್ತಾಯಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

2 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

2 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

2 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago