Mysore
27
broken clouds

Social Media

ಶನಿವಾರ, 16 ಮೇ 2026
Light
Dark

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ಅಭಾವ ಉಂಟಾಗಿದೆ.

ಈ ಮಧ್ಯೆ ಕೆಎಸ್‌ಆರ್‌ಟಿಸಿ ಬಸಗಳಿಗೂ ಡೀಸೆಲ್‌ ಸಮಸ್ಯೆಯಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ತಕ್ಷಣಕ್ಕೆ ಯಾವುದೇ ಇಲ್ಲ. ಸಾರಿಗೆ ಇಲಾಖೆಯ ನಾಲ್ಕು ನಿಗಮಕ್ಕೂ ಏನೂ ತೊಂದರೆ ಇಲ್ಲ ಎಂದು ಹೇಳಿದರು.

ಕೆಎಸ್‌ಆರ್‌ಟಿಸಿ ಬಸ್‌ಗಳಿಗೂ ಡೀಸೆಲ್‌ ಸಮಸ್ಯೆ ಇಲ್ಲ. ಯುದ್ಧ ಮುಂದುವರಿದರೆ ಏನಾದರೂ ಸಮಸ್ಯೆ ಆಗಬಹುದು. ತಕ್ಷಣಕ್ಕೆ ಯಾವುದೇ ತೊಂದರೆಯಿಲ್ಲ ಎಂದು ಸ್ಪಷ್ಟನೆ ನೀಡಿದರು.

Tags:
error: Content is protected !!