ರಾಜ್ಯದಲ್ಲಿ ಜೂನ್ 24ರಂದು 8 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದಲ್ಲಿ ಈ ಬಾರಿಯೂ ವರುಣದೇವ ಯಾಕೋ ಕೃಪೆ ತೋರುತ್ತಿಲ್ಲ ಎಂದು ರೈತರು ಮನನೊಂದಿದ್ದರು. ಈ ಬೆನ್ನಲ್ಲೇ ರಾಜ್ಯ ಹವಾಮಾನ ಇಲಾಖೆ ರೈತರಿಗೆ ಭಾರೀ ಸಿಹಿ ಸುದ್ದಿಯೊಂದನ್ನು ನೀಡಿದೆ. ಜೂನ್ 22ರಂದು ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಜೂನ್ 24ರವರೆಗೆ ಉತ್ತರ, ದಕ್ಷಿಣ ಒಳನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೂನ್ 22ರಂದು ಕರಾವಳಿಯ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್ 23ರಂದು ಕರಾವಳಿಯ 3 ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ತುಮಕೂರು, ಮೈಸೂರು, ದಾವಣಗೆರೆ, ಧಾರವಾಡ ಹಾಗೂ ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್ 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ೨೦ ಸೆಂ.ಮೀ ಮಳೆಯಾಗುವ ಸಾಧ್ಯತೆಯಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…