ಬೆಂಗಳೂರು: ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರು ಹೀಗೆನೇ. ಅವರು ಎಂದಾದರೂ ಪಕ್ಷದ ಕೆಲಸವನ್ನು ಮಾಡಿದ್ದಾರಾ? ಇವರಿಗೆ ಬಡವರ ಕಷ್ಟ ಕಾಣಿಸುತ್ತಾ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲೆ ಸಿಟಿ ರವಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಅಪರಾಧ ಚಟುವಟಿಕೆ ಹಿನ್ನಲೆಯಿರುವ ಒಬ್ಬ ವ್ಯಕ್ತಿ ಇಂದು ದೇಶದ ಉನ್ನತ ಸ್ಥಾನದಲ್ಲಿದ್ದಾರೆ. ಅವರೊಬ್ಬ ಗೂಂಡಾ, ರೌಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಯತೀಂದ್ರ ಹರಿಹಾಯ್ದಿದ್ದರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತಾಡುವಾಗ ಸಿಟಿ ರವಿ, ಯತೀಂದ್ರ ವಿರುದ್ಧ ಮಾತನಾಡಿದ್ದಾರೆ.
1982ರಲ್ಲೇ ಅಮಿತ್ ಶಾ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್‌ಎ ಕೂಡ ಆಗಿರಲಿಲ್ಲ. ಅಪ್ಪನ ದುಡ್ಡಿನ ಮೇಲೆ ಶಾಸಕರಾದವರು ಈಗ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದವು. ಆಗಲೂ ನಮ್ಮ ಮೇಲೂ ಗೂಂಡಾ ಆಕ್ಟ್ ಹಾಕಿದ್ರು ಹಾಗಾದ್ರೆ ನಾವು ಗೂಂಡಾಗಳಾ..? ಅಪ್ಪನ ದುಡ್ಡಿನಲ್ಲಿ ಚುನಾವಣೆ ಎದುರಿಸಿದ ಇವರೆಲ್ಲಾ, ಚುನಾವಣೆ ಮುಗಿದ ಮೇಲೆ ಎಲ್ಲಿರುತ್ತಾರೋ ಎಂದು ಪ್ರಶ್ನಿಸಿದರು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…