ಬೆಂಗಳೂರು: ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನೆನಪಿಗಾಗಿ ಶಾಶ್ವತ ಸ್ಮಾರಕ ನಿರ್ಮಿಸಲು ಚಿಂತಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರಕ ನಿರ್ಮಾಣ ಜನಸಾಮಾನ್ಯರ ಬೇಡಿಕೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
24 ವರ್ಷಗಳಿಂದಲೂ ಎಸ್.ಎಂ.ಕೃಷ್ಣ ಅವರೊಂದಿಗೆ ನಾನು ಸಂಪರ್ಕದಲ್ಲಿದ್ದು, ಅವರಿಂದ ಸಾಕಷ್ಟು ಕಲಿತಿದ್ದೇನೆ. ಯಾರನ್ನೂ ಟೀಕೆ ಮಾಡದೇ ಜನಸಾಮಾನ್ಯರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಟೀಕೆ ಮಾಡುವವರು ಅವರನ್ನು ನೋಡಿ ಕಲಿಯಬೇಕು ಎಂದು ಹೇಳಿದರು.
ಎಸ್.ಎಂ.ಕೃಷ್ಣ ಅವರಿಗೆ ಅವರೇ ಸರಿಸಾಟಿ. ಅವರು ಅವರ ಅಧಿಕಾರಾವಧಿಯಲ್ಲಿ ರೂಪಿಸಲಾದ ಕಾರ್ಯಕ್ರಮಗಳು ಸದಾಕಾಲ ಪ್ರಸ್ತುತವಾಗಿರುತ್ತವೆ. ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರಸಚಿವರಾಗಿ ಸಲ್ಲಿಸಿರುವ ಸೇವೆ ಅಮೋಘವಾದುದು. ಮುಖ್ಯಮಂತ್ರಿಯಾಗಿದ್ದಾಗ ನಿರ್ಮಿಸಲಾದ ವಿಕಾಸಸೌಧ, ಉದ್ಯೋಗಸೌಧ, ಸ್ವಸಹಾಯ ಸಂಘಗಳ ಸ್ಥಾಪನೆ, ಬಿಸಿಯೂಟ ಯೋಜನೆ, ಕಾವೇರಿ ನೀರಾವರಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ಸಂಸ್ಥೆಗಳನ್ನು ಹಾಗೂ ಯೋಜನೆಗಳನ್ನು ಆರಂಬಿಸಿದ ಕೀರ್ತಿ ಎಸ್.ಎಂ.ಕೃಷ್ಣ ಅವರಿಗೆ ಸೇರುತ್ತದೆ ಎಂದರು.
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…
ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…