ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ. ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಹಿಂದುಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಮೂಲಕ ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…