ರಾಜ್ಯ

ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ. ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ. ಹಿಜಾಬ್‌ ಬಗ್ಗೆ ಪ್ರಶ್ನೆ ಮಾಡಿದ್ದಾಗ ಅದನ್ನು ಕಾಂಗ್ರೆಸ್‌ ನಾಯಕರು ಸಮರ್ಥಿಸಿಕೊಂಡಿದ್ದರು. ಬಟ್ಟೆಯೊಳಗೆ ಏನು ಬೇಕಾದರೂ ಬಚ್ಚಿಟ್ಟುಕೊಳ್ಳಬಹುದು. ಆದರೆ ಜನಿವಾರದಲ್ಲಿ ಏನೂ ಅಡಗಿಸಿಕೊಳ್ಳಲಾಗುವುದಿಲ್ಲ. ಇದರ ಜೊತೆಗೆ ತಾಳಿ, ಓಲೆಗೂ ಕೈ ಹಾಕಿದ್ದಾರೆ ಎಂದು ದೂರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಹಿಂದುಗಳು ಕುಂಕುಮ ಇಟ್ಟುಕೊಳ್ಳಲು, ಜನಿವಾರ ಹಾಕಿಕೊಳ್ಳಲು ಅವಕಾಶವಿಲ್ಲ. ಹಿಜಾಬ್‌ ಹಾಕಿಕೊಂಡವರನ್ನು ತಪಾಸಣೆ ಮಾಡುವುದಿಲ್ಲ. ಹಿಂದೂಗಳ ಮೇಲೆ ಸಿಎಂ ಸಿದ್ದರಾಮಯ್ಯನವರಿಗೆ ಕೋಪ ಇದೆ. ಈ ಮೂಲಕ ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ. ಈ ಮೂಲಕ ವಿಕೃತ ಸಂತೋಷ ಕಂಡುಕೊಳ್ಳುತ್ತಿದೆ. ಇದನ್ನು ಜನರು ಅರ್ಥ ಮಾಡಿಕೊಳ್ಳಲಿ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

19 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago