ರಾಜ್ಯ

ಇದು ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ ಚಳವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ರಾಜಕೀಯ ಚಳವಳಿ ಅಲ್ಲ ಕಳೆದ ಐದಾರು ವರ್ಷಗಳಲ್ಲಿ 1,87,000 ಕೋಟಿ ರೂ.ಗಳಷ್ಟು ನ್ಯಾಯಯುತವಾಗಿ ಬರಬೇಕಾಗಿದ್ದ ಅನುದಾನವನ್ನು ರಾಜ್ಯಕ್ಕೆ ನೀಡಲಾಗಿಲ್ಲ.

ಈ ಅನ್ಯಾಯದ ವಿರುದ್ಧ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.ಜಂತರ್ ಮಂತರ್ ಐತಿಹಾಸಿಕ ಸ್ಥಳವಾಗಿದ್ದು, ಅನೇಕ ಚಳವಳಿಗೆ ಸಾಕ್ಷಿಯಾದ ಸ್ಥಳ. ಇಂತಹ ಜಾಗದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಸಚಿವರು, ಶಾಸಕರು ಈ ಹೋರಾಟದಲ್ಲಿ ಭಾಗವಹಿಸಿದ್ದಾರೆ.

ಇದು ರಾಜಕೀಯ ಚಳವಳಿ ಅಲ್ಲ. ಕೇಂದ್ರ ಸರ್ಕಾರದ ವಿರುದ್ಧದ ಈ ಹೋರಾಟವನ್ನು ಪಕ್ಷಾತೀತವಾಗಿ ಮಾಡಬೇಕೆಂಬ ಮನವಿಯನ್ನು ರಾಜ್ಯ ಬಿಜೆಪಿಯ ನಾಯಕರಿಗೂ ಮಾಡಲಾಗಿದೆ ಎಂದರು.

100 ರೂ. ಗಳಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ : ಇದು ಐತಿಹಾಸಿಕವಾದ ಪ್ರತಿಭಟನೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ತೆರಿಗೆ ಪಾಲು 4.71 % ಬಂದಿತ್ತು. 15 ನೇ ಹಣಕಾಸು ಆಯೋಗದಲ್ಲಿ 3.64 % ಕ್ಕೆ ಇಳಿಯಿತು.

ಇದರಿಂದ ರಾಜ್ಯಕ್ಕೆ ಬರುವ ತೆರಿಗೆಯಲ್ಲಿ ಶೇ. 40 ರಿಂದ 45 ರವರೆಗೆ ಕಡಿತವಾಗಿದೆ. ಒಟ್ಟಾರೆಯಾಗಿ 14 ನೇ ಹಣಕಾಸು ಆಯೋಗದ ಶಿಫಾರಸ್ಸನ್ನೇ 15 ನೇ ಹಣಕಾಸು ಆಯೋಗದಲ್ಲಿ ಅನುಸರಿಸಿದ್ದರೆ, ರಾಜ್ಯಕ್ಕೆ 62,098 ಕೋಟಿ ರೂ. ರಾಜ್ಯಕ್ಕೆ ಬರುತ್ತಿತ್ತು. ರಾಜ್ಯದಿಂದ ಒಟ್ಟು 4,30,000 ಕೋಟಿ ತೆರಿಗೆ ಮೊತ್ತವನ್ನು ಕೇಂದ್ರಕ್ಕೆ ನೀಡಲಾಗುತ್ತದೆ.

ಅಂದರೆ 100 ರೂ. ತೆರಿಗೆಯಲ್ಲಿ ರಾಜ್ಯಕ್ಕೆ ಕೇವಲ 12 ರಿಂದ 13 ರೂ. ದೊರೆಯುತ್ತಿದೆ. ಇದು ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ. ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದು, ಒಬ್ಬರೂ ಈ ಬಗ್ಗೆ ಕೇಂದ್ರ ಮುಂದೆ ಮಾತನಾಡಿಲ್ಲ.

ಅಲ್ಲದೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿಯವರು ಈ ಅನ್ಯಾಯವನ್ನು ಸರಿಪಡಿಸುವ ಮನವಿ ಮಾಡಿರುವುದಿಲ್ಲ. ಈ ಎಲ್ಲ ಕಾರಣಗಳಿಗಾಗಿ ಇಂದು ನವದೆಹಲಿಯಲ್ಲಿ ಹೋರಾಟ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

 

ಉತ್ತರಪ್ರದೇಶ ರಾಜ್ಯಕ್ಕೆ 2,80,000 ಕೋಟಿ ರೂ. ಕೇಂದ್ರ ನೀಡುತ್ತಿದೆ. ಅಂತೆಯೇ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನಗಳಿಗೂ ನೀಡಲಾಗುತ್ತಿದೆ. ಈ ಯಾವ ರಾಜ್ಯಗಳೂ ಜನಸಂಖ್ಯಾ ನಿಯಂತ್ರಣದ ಬಗ್ಗೆ ಕ್ರಮ ಕೈಗೊಂಡಿಲ್ಲ. ಜನಸಂಖ್ಯೆ, ತಲಾ ಆದಾಯ, ಸಮುದಾಯಗಳ ಅಭಿವೃದ್ಧಿ ಸೇರಿದಂತೆ ಹಲವು ಮಾನದಂಡಗಳಿಂದ ಅನುದಾನ ಹಂಚಿಕೆಯನ್ನು ನಿರ್ಧರಿಸಲಾಗುತ್ತದೆ. 15 ನೇ ಹಣಕಾಸು ಆಯೋಗದಲ್ಲಿ 2011ರ ಜನಗಣತಿಯನ್ನು ಪರಿಗಣಿಸುತ್ತಿದ್ದಾರೆ ಎಂದು ತಿಳಿಸಿದರು.

andolanait

Recent Posts

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

21 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

34 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

40 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

1 hour ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

4 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

4 hours ago