ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಜಾಗತಿಕ ತಾಪಮಾನ ಏರಿಕೆ, ತೇವಾಂಶದ ಕೊರತೆ, ಸ್ಪಷ್ಟ ಆಕಾಶದ ಪರಿಣಾಮದಿಂದಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನ 4ರಿಂದ 5 ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪ್ರಸ್ತುತ ಕಲಬುರಗಿ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ 35 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ತಾಪಮಾನ ದಾಖಲಾಗುತ್ತಿದೆ.
ಹವಾಮಾನ ತಜ್ಞರ ಪ್ರಕಾರ, ಮಾರ್ಚ್ ಆರಂಭದಿಂದಲೇ ಬಿಸಿಲಿನ ತೀವ್ರತೆ ಹೆಚ್ಚಾಗಲಿದ್ದು, ವಿಶೇಷವಾಗಿ ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ತೀವ್ರ ಬಿಸಿಲು ಇರುವ ಸಾಧ್ಯತೆಯಿದೆ. ಇದರಿಂದ ಜನಸಾಮಾನ್ಯರು, ವೃದ್ಧರು, ಮಕ್ಕಳು ಮತ್ತು ರೋಗಿಗಳು ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಲಾಗಿದೆ.
ಹವಾಮಾನ ಇಲಾಖೆಯ ಈ ಮುನ್ಸೂಚನೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ಬೇಸಿಗೆ ಸಿದ್ಧತೆಗಳನ್ನು ತ್ವರಗತಿಯಲ್ಲಿ ಮಾಡುವಂತೆ ಸೂಚಿಸಲಾಗಿದೆ. ನೀರು ಸಂಗ್ರಹ, ವಿದ್ಯುತ್ ಪೂರೈಕೆ ಮತ್ತು ಆರೋಗ್ಯ ಸೇವೆಗಳಲ್ಲಿ ವಿಶೇಷ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರಿಗೆ ಸಲಹೆಗಳು
• ಮಧ್ಯಾಹ್ನದ ಸಮಯದಲ್ಲಿ ಹೆಚ್ಚು ಹೊರಗೆ ಓಡಾಡುವುದನ್ನು ತಪ್ಪಿಸಿ
• ಸಾಕಷ್ಟು ನೀರು ಕುಡಿಯಿರಿ
• ಬಿಸಿಲಿನಿಂದ ರಕ್ಷಣೆಗೆ ಟೋಪಿ, ಕನ್ನಡಕ, ಛತ್ರಿ ಬಳಸಿ
• ವೃದ್ಧರು ಮತ್ತು ಮಕ್ಕಳ ಆರೋಗ್ಯದತ್ತ ವಿಶೇಷ ಗಮನ
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…