ಬೆಂಗಳೂರು: ರಾಜ್ಯ ಸರ್ಕಾರ ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರಂಟಿ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೆರೆಪೀಡಿತ ಪ್ರದೇಶಗಳಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಲಕ್ಷಾಂತರ ರೈತ ಕುಟುಂಬಗಳು ಈ ದೀಪಾವಳಿಯನ್ನು ಕಗ್ಗತ್ತಲಲ್ಲಿ ಕಳೆಯುವ ದುಸ್ಥಿತಿಗೆ ದೂಡಿದೆ.
ಒಂದು ಕಡೆ ಕೇಂದ್ರ ಸರ್ಕಾರದ ಜಿಎಸ್ಟಿ ದರ ಇಳಿಕೆಯಿಂದ ಜನಸಾಮಾನ್ಯರು ತಮಗೆ ಇಷ್ಟವಾದ ವಸ್ತುಗಳನ್ನು ಕೊಳ್ಳುವ ಮೂಲಕ ಸಂತೋಷದಿಂದ ದೀಪಾವಳಿ ಹಬ್ಬಕ್ಕಾಗಿ ಕಾಯುತ್ತಿದ್ದರೆ, ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ರೈತರು ಪರಿಹಾರಕ್ಕಾಗಿ ಕಾದು ಕಾದು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ಎದುರಾಗಿದೆ. ಈ ರೈತವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…