ರಾಜ್ಯ

ಇದು ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ: ಸರ್ಕಾರದ ವಿರುದ್ಧ ಆರ್.‌ಅಶೋಕ್‌ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರಂಟಿ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೆರೆಪೀಡಿತ ಪ್ರದೇಶಗಳಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡಿದೆ. ಲಕ್ಷಾಂತರ ರೈತ ಕುಟುಂಬಗಳು ಈ ದೀಪಾವಳಿಯನ್ನು ಕಗ್ಗತ್ತಲಲ್ಲಿ ಕಳೆಯುವ ದುಸ್ಥಿತಿಗೆ ದೂಡಿದೆ.

ಒಂದು ಕಡೆ ಕೇಂದ್ರ ಸರ್ಕಾರದ ಜಿಎಸ್ಟಿ ದರ ಇಳಿಕೆಯಿಂದ ಜನಸಾಮಾನ್ಯರು ತಮಗೆ ಇಷ್ಟವಾದ ವಸ್ತುಗಳನ್ನು ಕೊಳ್ಳುವ ಮೂಲಕ ಸಂತೋಷದಿಂದ ದೀಪಾವಳಿ ಹಬ್ಬಕ್ಕಾಗಿ ಕಾಯುತ್ತಿದ್ದರೆ, ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ರೈತರು ಪರಿಹಾರಕ್ಕಾಗಿ ಕಾದು ಕಾದು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ಎದುರಾಗಿದೆ. ಈ ರೈತವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago