ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಷಿಕ್ಯೂಷನ್ ಬಗ್ಗೆ ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದು, ಸಿಎಂ ವಿಚಾರಣೆಗೆ ಅನುಮತಿ ನೀಡಿರುವುದು ಮೈತ್ರಿ ಹೋರಾಟಕ್ಕೆ ಸಂದ ಜಯ ಎಂದು ಹೇಳಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರು, ಮೂಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆಗೆ ಗೌರವಾನ್ವಿತ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯ. ಈ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕೆಂದು ಒತ್ತಾಯಿಸಿ ಜೆಡಿಎಸ್, ಬಿಜೆಪಿ ಪಕ್ಷಗಳು ಬೆಂಗಳೂರಿನಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದ್ದನ್ನು ಸ್ಮರಿಸಬಹುದು.
ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಕ್ರಮ ಸಾಬೀತುಪಡಿಸಿದೆ. ಸೂರ್ಯಚಂದ್ರರು ಇರುವುದು ಎಷ್ಟು ಸತ್ಯವೋ ಮೂಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ.
ಮಾನ್ಯ ಮುಖ್ಯಮಂತ್ರಿಗಳಿಗೆ ಅನ್ಯ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು. ಇಲ್ಲವಾದರೆ, ನಮ್ಮ ಹೋರಾಟ ನಿರಂತರ ಎಂದು ಪೋಸ್ಟ್ ಹಂಚಿಕೊಂಡಿದ್ದು, ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…