ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬ್ರೇಕ್‌ಫಾಸ್ಟ್‌ಗಾಗಿ ಮನೆಗೆ ಆಹ್ವಾನಿಸಿದ್ದರು. ಹಾಗಾಗಿ ಒಪ್ಪಿ ಬಂದಿದ್ದೆ. ಇಬ್ಬರೂ ಸೇರಿ ಉಪಹಾರ ಸೇವಿಸಿದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಮೊನ್ನೆ ನಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ ಬಂದಾಗ ನನ್ನನ್ನೂ ಮಂಗಳವಾರ ಬ್ರೇಕ್‌ಫಾಸ್ಟ್‌ಗೆ ಬನ್ನಿ ಎಂದು ಆಹ್ವಾನಿಸಿದ್ದರು. ಹಾಗಾಗಿ ಬಂದಿದ್ದೆ. ಇಬ್ಬರೂ ಸೇರಿ ಬ್ರೇಕ್‌ಫಾಸ್ಟ್ ಮಾಡಿದ್ದು, ಪಕ್ಷದ ವಿಚಾರ, ಅಧಿವೇಶನದ ವಿಚಾರ ಸೇರಿದಂತೆ ಎಲ್ಲವನ್ನೂ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.
ಡಿಸೆಂಬರ್.8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಚರ್ಚೆ ನಡೆಸಿದ್ದೇವೆ. ರಾಜ್ಯದ ಅಭಿವೃದ್ಧಿ ಕೆಲಸ, ರೈತರ ಸಮಸ್ಯೆ, ಬೆಳೆ ಪರಿಹಾರ, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ಬೆಳೆಗೆ ಸಂಬಂಧಿಸಿದಂತೆ ರೈತರ ಬೇಡಿಕೆ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ವಿಪಕ್ಷಗಳು ಯಾವುದೇ ವಿಚಾರ ಪ್ರಸ್ತಾಪ ಮಾಡಿದರೂ ಎದುರಿಸುತ್ತೇವೆ. ನಮ್ಮ ಸರ್ಕಾರ ಯಾವಾಗಲೂ ರೈತರ ಪರ ಇದೆ ಎಂದು ಹೇಳಿದರು.
ಇನ್ನು ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ನಾಯಕರು ಏನು ಹೇಳುತ್ತಾರೆ ಅದೃಂತೆ ನಡೆದುಕೊಳ್ಳುತ್ತೇವೆ. ಅವರ ನಿರ್ಧಾರವೇ ಅಂತಿಮ ಎಂದು ಸ್ಪಷ್ಟಪಡಿಸಿದರು.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…